ಪ್ರಧಾನಿ ಮೋದಿಯವರಿಂದ ಇಂದಿನಿಂದ 2 ದಿನಗಳ ಕಾಲ ಶ್ರೀಲಂಕಾ ಪ್ರವಾಸ



11-05-2017 1170

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದಿನಿಂದ 2 ದಿನಗಳ ಕಾಲ  ಶ್ರೀಲಂಕಾ ಪ್ರವಾಸ ಕೈಗೊಳ್ಳುತ್ತಿದ್ದು, ಅಲ್ಲಿನ ಬೌದ್ಧರ ಸುಪ್ರಸಿದ್ಧ ಸಮಾರಂಭವಾದ 'ವೈಶಾಕ ದಿನ' ಆಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. 

ಲಂಕಾ ರಾಜಧಾನಿ ಕೊಲಂಬೋದಲ್ಲಿ ಇಂದು ಅಂತರಾಷ್ಟ್ರೀಯ ವೈಶಾಕ ದಿನ ಆಚರಣೆಯಲ್ಲಿ 100 ರಾಷ್ಟ್ರಗಳ 400ಕ್ಕೂ ಹೆಚ್ಚು ಪ್ರತಿನಿಧಿಗಳನ್ನೊಳಗೊಂಡ ಅಂತರಾಷ್ಟ್ರೀಯ ಬೌದ್ಧರ ಸಮ್ಮೇಳನ ಸಹ ನಡೆಯುತ್ತಿದ್ದು, ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. 

ಶ್ರೀಲಂಕಾ ಪ್ರವಾಸ ಕುರಿತಂತೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದಿರುವ ಪ್ರಧಾನಿ ಮೋದಿಯವರು, ಇದು ಎರಡು ವರ್ಷಗಳಲ್ಲಿ ಇದು ಎರಡನೇ ಭೇಟಿಯಾಗಿದ್ದು, ಉಭಯ ರಾಷ್ಟ್ರಗಳ ನಡುವಿನ ಉತ್ತಮ ಬಾಂಧವ್ಯವನ್ನು ಇದು ಸೂಚಿಸುತ್ತದೆ ಎಂದು ಹೇಳಿದ್ದಾರೆ. ಈ ಭೇಟಿಯಿಂದ ಉಭಯ ರಾಷ್ಟ್ರಗಳ ಸಂಬಂಧ ಮತ್ತಷ್ಟು ಗಟ್ಟಿಗೊಳ್ಳಲಿದೆ ಎಂದಿದ್ದಾರೆ. 


ಒಂದು ಪ್ರತಿಕ್ರಿಯೆಗಳು ಬಿಡಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ