ಮುಂದುವರೆದ ಗುತ್ತಿಗೆ ಪೌರ ಕಾರ್ಮಿಕರ ಪ್ರತಿಭಟನೆ !


13-06-2017 238

ಮೈಸೂರು:- ಗುತ್ತಿಗೆ ಪೌರ ಕಾರ್ಮಿಕರ ಖಾಯಮಾತಿಗಾಗಿ ನಡೆಯುತ್ತಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿರಿಸಿದೆ. ಮೈಸೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಪೌರ ಕಾರ್ಮಿಕರಿಂದ ಎರಡನೇ ದಿನವೂ ಪ್ರತಿಭಟನೆ ಮುಂದುವರಿಯಿತು. ನಗರಪಾಲಿಕೆ ಕಚೇರಿಯ ಮುಖ್ಯ ದ್ವಾರದಲ್ಲಿ ಪೌರ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ನೂರಾರು ಪೌರ ಕಾರ್ಮಿಕರು ಭಾಗಿಯಾಗಿದ್ದರು. ಪೌರ ಕಾರ್ಮಿಕರು ಸ್ವಚ್ಚತಾ ಕಾರ್ಯವನ್ನು ಸ್ಥಗಿತಗೊಳಿಸಿರುವ ಪರಿಣಾಮ ನಗರದ ಹಲವೆಡೆ ಇಂದು ಕೂಡ ಕಸದ ರಾಶಿ ರಾರಾಜಿಸುತ್ತಿದ್ದು. ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 574 ಮಂದಿ ಖಾಯಂ ನೌಕರರು ಮಾತ್ರ ಸ್ವಚ್ಚತಾ ಕಾರ್ಯದಲ್ಲಿ ಭಾಗಿಯಾಗಿದ್ದರು. 


ಒಂದು ಕಮೆಂಟನ್ನು ಬಿಡಿ