ಉಪಚುನಾವಣೆಯಲ್ಲಿ ಬಿಜೆಪಿಯೇ ಮೇಲುಗೈ!


07-12-2019 201

ಮೊನ್ನೆ ನಡೆದಿರುವ ಉಪಚುನಾವಣೆ,  ಬಿ.ಎಸ್​​ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಭವಿಷ್ಯ ನಿರ್ಧರಿಸಲಿದೆ ಅನ್ನೊದು ಸತ್ಯ. ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ 9-12 ಸೀಟುಗಳು ಬಿಜೆಪಿಗೆ ಪಕ್ಕಾ ಎನ್ನಲಾಗುತ್ತಿದೆ. ಈ ಮಧ್ಯೆ ಸೂಪರ್ ಸುದ್ದಿಗೆ ತಿಳಿದುಬಂದಿರುವ ಮಾಹಿತಿಯ ಪ್ರಕಾರ ಬಿಜೆಪಿಗೆ 6 ರಿಂದ 7 ಸ್ಥಾನಗಳು ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬಿಜೆಪಿ ಇಷ್ಟು ಸ್ಥಾನಗಳನ್ನು ಗೆದ್ದರೆ ಸರ್ಕಾರ ಭದ್ರವಾಗುತ್ತದೆ ಅನ್ನೋದ್ರಲ್ಲಿ ಎರಡು ಮಾತಿಲ್ಲ.

ಈ ಮಧ್ಯೆ ಉಪಚುನಾವಣೆಯಲ್ಲಿ ಬಿಜೆಪಿ 6-7 ಸ್ಥಾನಗಳನ್ನು ಗೆದ್ದರೂ ಕೆಲ ಪ್ರಮುಖರು ಪಕ್ಷ ಬಿಟ್ಟು ಹೋಗುವ ಸಾಧ್ಯತೆ ಇದೆ ಎಂದು ಸುದ್ದಿ ಮೂಲಗಳು ತಿಳಿಸಿವೆ. ಹೀಗಾಗಿ ಉಪಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆದ್ದರೂ, ಯಡಿಯೂರಪ್ಪ ಹೇಗೆ ಸರ್ಕಾರವನ್ನು ಉಳಿಸಿಕೊಳ್ಳುತ್ತಾರೆ ಎಂಬುದೇ ಕುತೂಹಲ.

ಇನ್ನು, ಚುನಾವಣೋತ್ತರ ಸಮೀಕ್ಷೆ ಭವಿಷ್ಯದಂತೆ ಬಿಜೆಪಿಗೆ 9- 12, ಕಾಂಗ್ರೆಸ್‌ಗೆ 3-6 ಮತ್ತು ಜೆಡಿಎಸ್ 1 ಸ್ಥಾನದಲ್ಲಿ ಮುನ್ನಡೆ ಸಾಧಿಸಲಿದೆ ಎನ್ನಲಾಗಿದ್ದು, ಎಲ್ಲ ಕುತೂಹಲಗಳಿಗೂ ಇದೇ ಡಿಸೆಂಬರ್​​ 9 ರಂದು ತೆರೆ ಬೀಳಲಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

By election B S yedyurappa BJP Vote