ಹಿಂದೂ ಮತ್ತು ಮುಸ್ಲಿಂ ಹಬ್ಬಗಳ ಸಂದರ್ಭದಲ್ಲಿ ಬೈಕ್ ಗಳಿಗೆ ಬೆಂಕಿ ಹಚ್ಚುವ ಪ್ರಕರಣಗಳು ಹೆಚ್ಚಾಗುತ್ತಿವೆ !


13-06-2017 434

ಬೆಂಗಳೂರು:- ರಂಜಾನ್ ಮತ್ತು ಹಿಂದೂಗಳ ಗಣಪತಿ ಹಬ್ಬದ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ಗಳಿಗೆ ಬೆಂಕಿ ಹಚ್ಚುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ ಎಂದು ಆಡಳಿತ ಪಕ್ಷದ ಪ್ರಸನ್ನ ಕುಮಾರ್ ವಿಧಾನಸಭೆಯಲ್ಲಿಂದು ಕಳವಳ ವ್ಯಕ್ತಪಡಿಸಿದರು. ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ರಂಜಾನ್ ಮತ್ತು ಗಣಪತಿ ಹಬ್ಬದ ವೇಳೆ ಇಂತಹ ಘಟನೆಗಳು ನಡೆಯುತ್ತಿವೆ. ಗಲಭೆ ಆದ ಬಳಿಕ ಎಚ್ಚೆತ್ತುಕೊಳ್ಳುವ ಮುನ್ನವೇ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು. ಶಿವಮೊಗ್ಗದಲ್ಲಿ ಆರ್.ಎ.ಏಫ್ ತುಕಡಿಯನ್ನು ಶೀಘ್ರದಲ್ಲೇ ನಿಯೋಜನೆ ಮಾಡುವಂತೆ ಒತ್ತಾಯಿಸಿದರು. ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮಾತನಾಡಿ, ಕೋಮುಗಲಭೆ ತಡೆಯಲು ಸರಕಾರ ಸೂಕ್ತ ಕ್ರಮ ಕೈಗೊಂಡಿದೆ. ಈಗಾಗಲೇ ಹೆಚ್ಚುವರಿ ಕೆ.ಎಸ್.ಆರ್.ಪಿ ತುಕಡಿಗಳು ಶಿವಮೊಗ್ಗದಲ್ಲಿವೆ. ಆರ್.ಎ.ಎಫ್ ತುಕಡಿಗಳನ್ನು ಖಾಯಂ ಆಗಿ ನಿಯೋಜನೆ ಮಾಡುವ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.