ಭ್ರಷ್ಟಾಚಾರದಲ್ಲಿ ಪ್ರಥಮ ಸ್ಥಾನ ಪಡೆದಿರುವುದೇ ಸಿದ್ದರಾಮಯ್ಯ ಸರ್ಕಾರದ ಸಾಧನೆ ?


16-06-2017 286

ಹಾಸನ: ದೇಶದಲ್ಲಿಯೇ ಭ್ರಷ್ಟಾಚಾರದಲ್ಲಿ ಪ್ರಥಮ ಸ್ಥಾನ ಪಡೆದಿರುವುದೇ ಸಿದ್ದರಾಮಯ್ಯ ಅವರ ಸರ್ಕಾರದ ಸಾಧನೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವ್ಯಂಗವಾಡಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು ಸರ್ಕಾರದ ನಾಲ್ಕು ವರ್ಷಗಳ ಆಡಳಿತದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಕೊಲೆ ಅತ್ಯಾಚಾರ ಮಿತಿಮೀರಿದೆ, ರೈತರ ಆತ್ಮಹತ್ಯೆಯಲ್ಲಿ ದೇಶದಲ್ಲಿಯೇ ರಾಜ್ಯ ಮೂರನೆ ಸ್ಥಾನದಲ್ಲಿದೆ, ಇದು ರೈತರ ಶೋಚನೀಯ ಸ್ಥತಿ ಎಂದರು. ಮತ್ತು ಸರ್ಕಾರದ ಮೊದಲ ಆದ್ಯತೆ, ನೀರಾವರಿ ಯೋಜನೆಗಳಿಗೆ ನೀಡಬೇಕು. ದಕ್ಷ ಪ್ರಾಮಾಣಿಕ ಅಧಿಕಾರಿಗಳು ಕೆಲಸ ಮಾಡದಷ್ಟು ಅಭದ್ರತೆ ರಾಜ್ಯದಲ್ಲಿ  ಕಾಡುತ್ತಿದೆ ಎಂದು ತಿವಾರಿ ಅವರ ಕೊಲೆ ಪ್ರಕರಣವನ್ನು ಕುರಿತು ಹೇಳಿದ್ದಾರೆ. ಅಲ್ಲದೇ ಲೋಕಾಯುಕ್ತವನ್ನು ಶಕ್ತಿ ಇಲ್ಲದಂತೆ ಮಾಡಿ, ಎಸಿಬಿ ರಚನೆ ಮಾಡಿಕೊಂಡು ತಮಗೆ ಬೇಕಾದವರಿಗೆ ರಕ್ಷಣೆ ಮಾಡುತ್ತಿದ್ದಾರೆ ಎಂದು ರೋಪಿಸಿದರು.


ಒಂದು ಕಮೆಂಟನ್ನು ಬಿಡಿ