ಇನ್ನೂ ಪೂರ್ಣವಾಗದ ಅಂಬೇಡ್ಕರ್ ಭವನಗಳು !


20-06-2017 427

ಬೆಂಗಳೂರು: ರಾಜ್ಯದಲ್ಲಿ ಅಪೂರ್ಣಗೊಂಡಿರುವ ಅಂಬೇಡ್ಕರ್ ಭವನಗಳ ನಿರ್ಮಾಣ ಕಾಮಗಾರಿಯನ್ನು ತ್ವರಿಗೊಳಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ವಿಧಾನಪರಿಷತ್ತಿನಲ್ಲಿಂದು ತಿಳಿಸಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಉತ್ತರಿಸಿದ ಸಚಿವರು ರಾಜ್ಯದಲ್ಲಿ ಅಪೂರ್ಣಗೊಂಡಿರುವ ಅಂಬೇಡ್ಕರ್ ಭವನಗಳ ನಿರ್ಮಾಣಕ್ಕೆ 250 ಕೋಟಿ ರೂಪಾಯಿಯನ್ನು ಸರ್ಕಾರ ನೀಡಿದ್ದು, ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು. ಇದೇ ವೇಳೆ ವಿರೋಧಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸರ್ಕಾರ ಮಂಜೂರು ಮಾಡಿರುವ ಹಣ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದ ವೆಚ್ಚವಾಗದೇ ಉಳಿದಿದೆ. ಹೀಗಾಗಿ ಹಲವೆಡೆ ಅಂಬೇಡ್ಕರ್ ಭವನಗಳು ನಿರ್ಮಾಣಗೊಂಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಯೋಜನೆಯ ವಿನ್ಯಾಸ, ಯೋಜನಾ ವೆಚ್ಚ ಇನ್ನಿತರ ವ್ಯತ್ಯಾಸಗಳಿಂದಾಗಿ ಭವನಗಳ ನಿರ್ಮಾಣ ಅಪೂರ್ಣಗೊಂಡಿದೆ. ಈ ಬಗ್ಗೆ ತುರ್ತುಗಮನ ಹರಿಸಲಾಗುವುದು ಎಂದು ಸಚಿವ ಆಂಜನೇಯ ಭರವಸೆ ನೀಡಿದರು.


ಒಂದು ಕಮೆಂಟನ್ನು ಬಿಡಿ