ಹಣಕಾಸಿನ ವಿಚಾರದಲ್ಲಿ ಘರ್ಷಣೆ 5 ಮಂದಿ ಮೃತಿ !


27-06-2017 529

ಲಖನೌ: ಉತ್ತರ ಪ್ರದೇಶದ ರಾಯ್ ಬರೇಲಿ ಊಂಚ್ ಹಾರ್ ನಲ್ಲಿ ನಡೆದ ಹಿಂಸಾಚಾರದಲ್ಲಿ ಐವರು ಪ್ರಾಣ ಕಳೆದುಕೊಂಡಿದ್ದಾರೆ. ಆಪ್ಟಾ ಗ್ರಾಮದಲ್ಲಿ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ 2 ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಗ್ಯಾಂಗ್ ವಾರ್ ನಲ್ಲಿ ಫೈರಿಂಗ್ ಮಾಡಲಾಗಿದ್ದು, 5 ಮಂದಿ ಮೃತಪಟ್ಟಿದ್ದಾರೆ. ಹಿಂಸಾಚಾರಕ್ಕೆ ಗ್ರಾಮ ನಲುಗಿ ಹೋಗಿದ್ದು, ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿ, ಗುಂಪುಗಳನ್ನು ಚದುರಿಸಿ, ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.


ಒಂದು ಕಮೆಂಟನ್ನು ಬಿಡಿ