ರಾಷ್ಟ್ರಪತಿ ಚುನಾವಣೆ: ನಾಮಪತ್ರ ಸಲ್ಲಿಸಿದ ಮೀರಾ ಕುಮಾರ್ !


28-06-2017 299

ನವದೆಹಲಿ: ವಿಪಕ್ಷಗಳ ವತಿಯಿಂದ ರಾಷ್ಟ್ರಪತಿ ಚುನಾವಣೆಗಾಗಿ ಒಮ್ಮತದ ಅಭ್ಯರ್ಥಿಯಾಗಿ ಮಾಜಿ ಸ್ಪೀಕರ್ ಮೀರಾ ಕುಮಾರ್ ಅವರು ಇಂದು ನಾಮಪತ್ರ ಸಲ್ಲಿಸಿದರು. 17 ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿರುವ ಮೀರಾ ಕುಮಾರ್ ಅವರು ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಎನ್‍ಸಿಪಿ ನ ಮುಖ್ಯಸ್ಥ ಶರದ್ ಪವಾರ್, ಲೋಕಸಭೆಯ ಕಾಂಗ್ರೆಸ್‍ ನಾಯಕ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್, ಮಾವೋವಾದಿ ಕಮ್ಯೂನಿಸ್ಟ್ ಪಕ್ಷದ ಸೀತಾರಾಂ ಯೆಚೂರಿ, ಓಮರ್ ಅಬ್ದುಲ್ಲಾ ಮೊದಲಾದ ನಾಯಕರ ಉಪಸ್ಥಿತರಿದ್ದರು.


ಒಂದು ಕಮೆಂಟನ್ನು ಬಿಡಿ