ಪ್ರತಾಪ್ ಸಿಂಹ ಅವರ ಕಚೇರಿ ಮುಂದೆ ಪ್ರತಿಭಟನೆ !


03-07-2017 289

ಮೈಸೂರು: ರಾಜ್ಯ ಸರ್ಕಾರ, ಸಹಕಾರ ಸಂಘಗಳಲ್ಲಿನ ಸಾಲಮನ್ನಾ ಮಾಡಿರುವಂತೆ, ಕೇಂದ್ರ ಸರ್ಕಾರವೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಸಂಪೂರ್ಣ ಸಾಲಮನ್ನಾ ಮಾಡುವಂತೆ ಒತ್ತಾಯಿಸಿ, ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮೈಸೂರಿನ ಜಲದರ್ಶಿನಿ ಅತಿಥಿ ಗೃಹದ ಆವರಣದಲ್ಲಿರುವ ಪ್ರತಾಪ್ ಸಿಂಹ ಅವರ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ಗ್ರಾಮಾಂತರ ವಿಭಾಗದ ಯುವ ಘಟಕದಿಂದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಮತ್ತು ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ಯಾವುದೇ ಕ್ರಮಕ್ಕೆ ಮುಂದಾಗದಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಸಾಲಮನ್ನಾ ಮಾಡಿಸಲು ಕೇಂದ್ರ ಸರ್ಕಾರ ಮೇಲೆ ರಾಜ್ಯದ ಸಂಸದರು ಒತ್ತಡ ಹೇರುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ