ಉತ್ತರ ಕರ್ನಾಟಕಕ್ಕೂ ಬೇಕು ಚಿತ್ರ ನಗರಿ..?


03-07-2017 466

ಧಾರವಾಡ: ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಶಂಕರ ಸುಗತೆ ಇಂದು ಸುದ್ದಿಗೋಷ್ಠಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೈಸೂರು ಬಳಿ ಚಿತ್ರ ನಗರಿ ಮಾಡುತ್ತಿರುವ ಸರ್ಕಾರ ಉತ್ತರ ಕರ್ನಾಟಕ ಭಾಗದಲ್ಲಿಯೂ ಚಿತ್ರ ನಗರಿ ಮಾಡಬೇಕು ಎಂದು ಇಲ್ಲಿ ಒತ್ತಾಯಿಸಿದ್ದಾರೆ. ಅಲ್ಲದೇ ಈ ಹಿಂದೆಯೂ ನಾವು ಮನವಿ ಮಾಡಿಕೊಂಡರೂ, ಮುಖ್ಯಮಂತ್ರಿ ತಮ್ಮೂರಿಗೆ ಚಿತ್ರ ನಗರಿ ತೆಗೆದುಕೊಂಡು ಹೋಗಿದ್ದಾರೆ ಎಂದು ವ್ಯಂಗವಾಡಿದ್ದಾರೆ. ಈ ಕುರಿತು ನಮಗೂ ನ್ಯಾಯ ದೊರಕಿಸಿಕೊಡುವಂತೆ ಪುನಃ ಮನವಿ ಮಾಡಿಕೊಂಡಿದ್ದೇವೆ, ಮನವಿಗೆ ಸ್ಪಂದಿಸಿ ಉತ್ತರ ಕರ್ನಾಟಕಕ್ಕೆ ಚಿತ್ರ ನಗರಿ ಕೊಡದೇ ಹೋದಲ್ಲಿ ಉತ್ತರ ಕರ್ನಾಟಕ ಭಾಗದ ಸಿನಿಮಾ ಕಲಾವಿದರೆಲ್ಲಾ ಸೇರಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ