ಕಾಂಗ್ರೆಸ್–ಜೆಡಿಎಸ್ ನ ಸಮಾಲೋಚನಾ ಸಭೆ !


03-07-2017 267

ಮೈಸೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲು ಆಣಿಯಾಗುತ್ತಿರುವ, ಮಾಜಿ ಸಂಸದ ಎಚ್.ವಿಶ್ವನಾಥ್ ನಾಳೆ ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇಂದು ಮೈಸೂರು ಜಿಲ್ಲೆ ಕೆ.ಆರ್ ನಗರ ಪಟ್ಟಣದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಸಮಾಲೋಚನಾ ಸಭೆ ಆಯೋಜನೆ ಮಾಡಲಾಗಿತ್ತು. ಸಭೆಯಲ್ಲಿ ಮಾಜಿ ಸಂಸದ ಎಚ್. ವಿಶ್ವನಾಥ್, ಕೆ.ಆರ್ ನಗರ ಕ್ಷೇತ್ರದ ಜೆಡಿಎಸ್ ಶಾಸಕ ಸಾ.ರಾ ಮಹೇಶ್ ಸೇರಿದಂತೆ ಹಲವು ಸ್ಥಳೀಯ ಮುಖಂಡರು ಭಾಗಿಯಾಗಿದ್ದರು. ಸಭೆಯಲ್ಲಿ ವಿಶ್ವನಾಥ್ ಅವರು ಜೆಡಿಎಸ್ ಪಕ್ಷಕ್ಕೆ ಸೇರುವ ಕುರಿತು ಚರ್ಚೆ ನಡೆಸಲಾಗಿದ್ದೂ, ನಾಳೆ ಅಧೀಕೃತವಾಗಿ ಜೆಡಿಎಸ್ ಗೆ ಸೇರಲಿದ್ದಾರೆ ಎಂದು ತಿಳಿದು ಬಂದಿದೆ.


ಒಂದು ಕಮೆಂಟನ್ನು ಬಿಡಿ