ಸಚಿವ ಪುತ್ರನಿಗೆ ಸಾಂವಿಧಾನಿಕ ಹುದ್ದೆ !


07-07-2017 393

ಮೈಸೂರು: ತಂದೆ ಸಚಿವರಾಗಿದ್ದ ಕಾರಣ ಸರ್ಕಾರಿ ಕಾಮಗಾರಿಗಳಿಗೆ ಚಾಲನೆ ನೀಡಿದ ಆರೋಪದಿಂದ ವ್ಯಾಪಕ ಟೀಕೆಗೆ ಗುರಿಯಾಗಿದ್ದ, ಸುನೀಲ್ ಬೋಸ್ ಗೆ ಸಚಿವ ಪುತ್ರನಿಗೆ ಸಾಂವಿಧಾನಿಕ ಹುದ್ದೆ ನೀಡಲಾಗಿದೆ. ಟೀಕೆಗಳಿಂದ ಪಾರಾಗಲು ಜಾಗೃತ ಸಮಿತಿ ಅಧ್ಯಕ್ಷರನ್ನಾಗಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಹೇಳಲಾಗುತ್ತಿದೆ. ಇದೀಗ ಸಚಿವ ಹೆಚ್.ಸಿ.ಮಹದೇವಪ್ಪ ಹಾಗೂ ಪುತ್ರ ಇಬ್ಬರೂ ಸಾಂವಿಧಾನಿಕ ಹುದ್ದೆ ಅಲಂಕರಿಸಿದ್ದಾರೆ. ಟಿ.ನರಸೀಪುರದ ವಸತಿ ಜಾಗೃತ ಸಮಿತಿ ಅಧ್ಯಕ್ಷರಾಗಿ ಸುನೀಲ್ ಬೋಸ್ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೆಲ ದಿನಗಳ ಹಿಂದಷ್ಟೇ ಸಿಎಂ ಪುತ್ರ ಯತೀಂದ್ರ ಅವರಿಗೂ ವರುಣ ಕ್ಷೇತ್ರದ ಜಾಗೃತ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಇದೀಗ ಸುನೀಲ್ ಬೋಸ್‌ ಗೂ ರಾಜ್ಯ ಸರ್ಕಾರ ಸಾಂವಿಧಾನಿಕ ಹುದ್ದೆ ನೀಡಿದೆ. ಒಟ್ಟಾರೆ ಕಾಂಗ್ರೆಸ್ ನಲ್ಲಿ ಕುಟುಂಬಸ್ಥರು ಮತ್ತು ಶಾಸಕರ ಪುತ್ರರನ್ನು ರಾಜಕೀಯವಾಗಿ ಮುನ್ನೆಲೆಗೆ ತರುವ ಪ್ರಯತ್ನ ನಡೆಯುತ್ತಲೇ ಇದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

ಮೈಸೂರು ಸಚಿವ ಸಾಂವಿಧಾನಿಕ ಹುದ್ದೆ !