ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ !


08-07-2017 436

ಬೆಂಗಳೂರು: ಗೋವುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ಮೂವರನ್ನು  ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಬಂಧಿಸಿದ್ದಾರೆ. ಶಿವಾಜಿನಗರದ ಸನಾ(28), ನಯಾಜ್(30), ಇಬ್ರಾಹಿಂ(32) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 18 ಗೋವುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಬಳ್ಳಾರಿಯಿಂದ ಶಿವಾಜಿನಗರಕ್ಕೆ ಗೋವುಗಳನ್ನು ಸಾಗಿಸುತ್ತಿದ್ದರು. ತಡ ರಾತ್ರಿಯಲ್ಲಿ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ವಿಮಾನನಿಲ್ದಾಣ ರಸ್ತೆಯ ನವಯುಗ ಟೋಲ್ ಬಳಿ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 18 ಗೋವುಗಳನ್ನು ರಕ್ಷಿಸಿ ದೇವನಹಳ್ಳಿಯ ವಿಜಯಪುರ ಗೋಶಾಲೆಗೆ ರವಾನೆ ಮಾಡಿ ಮುಂದಿನ ತನಿಖೆ ಕೈಗೊಂಡಿದ್ದಾರೆ.


ಒಂದು ಕಮೆಂಟನ್ನು ಬಿಡಿ