ಮಹದಾಯಿ ಯೋಜನೆಗೆ ಆಗ್ರಹಿಸಿ ರಸ್ತೆ ತಡೆ !


10-07-2017 311

ಧಾರವಾಡ: ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ರೈತ ಸಂಘ ದಿಂದ, ಧಾರವಾಡ ಹೊರವಲಯದ, ನರೇಂದ್ರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ, ಮಹದಾಯಿ ಯೋಜನೆಯನ್ನು ಶೀಘ್ರವಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿದ್ದಾರೆ. ರಸ್ತೆ ತಡೆಯಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು, ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಬೇಕಾಯಿತು. ಪ್ರತಿಭಟನೆಯಲ್ಲಿ ಮನಸೂರು ರೇವಣ ಸಿದ್ದೇಶ್ವರ ಸ್ವಾಮಿಗಳು ಭಾಗಿಯಾಗಿದ್ದರು.


ಒಂದು ಕಮೆಂಟನ್ನು ಬಿಡಿ