ಉಚಿತ ಬಸ್ ಪಾಸ್ ಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ !


11-07-2017 402

ಮೈಸೂರು: ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ, ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ವಿತರಿಸುವಂತೆ ಒತ್ತಾಯಿಸಿ, ಮೈಸೂರಿನಲ್ಲಿ ಬೀದಿಗಿಳಿದ ನೂರಾರು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದೂ, ಮೈಸೂರು ನಗರದ ಹತ್ತಕ್ಕೂ ಹೆಚ್ಚು ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಮೈಸೂರು ಅರಮನೆಯ ಬಲರಾಮ ದ್ವಾರದ ಬಳಿಯಿರುವ ಕೋಟೆ ಆಂಜನೇಯಸ್ವಾಮಿ ದೇಗುಲದ ಬಳಿಯಿಂದ, ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾ ನಿರತ ವಿದ್ಯಾರ್ಥಿಗಳು, ಬಳಿಕ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿ ಧರಣಿ ಪ್ರತಿಭಟನೆ ನಡೆಸಿದ್ದಾರೆ. ಬರದ ಹಿನ್ನೆಲೆಯಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ವಿತರಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದರು.


ಒಂದು ಕಮೆಂಟನ್ನು ಬಿಡಿ