ರೈತರಿಂದ ಕಾಡಾ ಕಚೇರಿಗೆ ಮುತ್ತಿಗೆ !


14-07-2017 1100

ಮೈಸೂರು: ರಾಜ್ಯದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರೈತರಿಂದ ಬೃಹತ್ ಪ್ರತಿಭಟನೆ ನಡೆದಿದೆ. ಮೈಸೂರಿನ ಕಾಡಾ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸುವ ಮೂಲಕ, ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಬ್ಬು ಬೆಳೆಗಾರರ ಸಂಘ ಮತ್ತು ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ, ಮೈಸೂರು ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ನೂರಾರು ರೈತರು ಭಾಗಿಯಾಗಿದ್ದರು. ರಾಜ್ಯದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ಕೂಡಲೇ ಸ್ಥಗಿತಗೊಳಿಸಿ, ರಾಜ್ಯದ ಜಲಾಶಯಗಳ ವ್ಯಾಪ್ತಿಗೆ ಬರುವ ಕೆರೆ ಕಟ್ಟೆಗಳಿಗೆ ಮೊದಲು ನೀರು ತುಂಬಿಸಬೇಕೆಂದು ಒತ್ತಾಯಿಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ