ರೈತರ ಕ್ಷಮೆ ಕೋರುವಂತೆ ಕಾಂಗ್ರೆಸ್ ಆಗ್ರಹ !


22-07-2017 701

ಬೆಂಗಳೂರು: ರೈತರ ಸಾಲ ಮನ್ನಾ ಮಾಡಲಾಗುದಿಲ್ಲ ಎಂದು, ಹೇಳಿಕೆ ನೀಡಿರುವ ಕೇಂದ್ರ ಸರ್ಕಾರದ ವಿರುದ್ದ, ಯೂತ್ ಕಾಂಗ್ರೆಸ್ ನಗರದಲ್ಲಿಂದು ಪ್ರತಿಭಟನೆ ನಡೆಸಿದೆ. ಅಲ್ಲದೇ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಯೂಥ್ ಕಾಂಗ್ರೆಸ್ ಕಾರ್ಯಕರ್ತರು, ರಾಜ್ಯ ಬಿಜೆಪಿ ವಿರುದ್ದವೂ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು. ಈ ಕೂಡಲೇ ಕೇಂದ್ರ ಸಚಿವರು ನೀಡಿರುವ ಹೇಳಿಕೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು. ರೈತ ವಿರೋಧ ಹೇಳಿಕೆ ನೀಡಿದ ಕೇಂದ್ರ ಸಚಿವರು ರೈತರ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನು ರಾಜ್ಯ ಸರ್ಕಾರ ಸಾಲ ಮನ್ನ ಮಾಡಿದಂತೆ ಕೇಂದ್ರ ಸರ್ಕಾರವೂ ರಾಷ್ಟ್ರೀಕೃತ ಬ್ಯಾಂಕ್ ನ ರೈತರ ಸಾಲ ಮನ್ನಾ ಮಾಡುವಂತೆ ಪಟ್ಟುಹಿಡಿದು ಪ್ರತಿಭಟನೆ ನಡೆಸಿದ್ದಾರೆ.


ಒಂದು ಕಮೆಂಟನ್ನು ಬಿಡಿ