ಹೋಬಳಿ ಸ್ಥಳಾಂತರಕ್ಕೆ ತೀವ್ರ ವಿರೋಧ !


24-07-2017 1024

ಕೊಪ್ಪಳ: ಕೊಪ್ಪಳದ ಅಳವಂಡಿ ಹೋಬಳಿಯನ್ನು ನೂತನ ಕುಕನೂರು ತಾಲ್ಲೂಕಿಗೆ ಸೇರ್ಪಡೆ ಮಾಡುತ್ತಿರುವುದನ್ನು ವಿರೋಧಿಸಿ, ಕರ್ನಾಟಕ ರಕ್ಷಣಾ ವೇದಿಕೆ ಯುವಸೈನ್ಯ ಕಾರ್ಯಕರ್ತರು, ಪ್ರತಿಭಟನೆ ನಡೆಸಿದ್ದಾರೆ. ಕೊಪ್ಪಳ ನಗರದ ಅಶೋಕ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕುಕನೂರು ತಾಲ್ಲೂಕಿಗೆ ಸೇರ್ಪಡೆಯನ್ನೂ ವಿರೋಧಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಕುಕನೂರು ತಾಲ್ಲೂಕು ವ್ಯಾಪ್ತಿಗೆ ಸೇರಿಸುವ, ನಿರ್ಧಾರವನ್ನು ಸರ್ಕಾರ  ಕೈಬಿಡುವಂತೆ ಆಗ್ರಹಿಸಿದ್ದಾರೆ. ಅಳವಂಡಿ ಹೋಬಳಿಯನ್ನು ಪ್ರಸ್ತುತ ಕೊಪ್ಪಳ ತಾಲ್ಲೂಕು ವ್ಯಾಪ್ತಿಯಲ್ಲಿಯೇ ಮುಂದುವರೆಸಲು ಪ್ರತಿಭಟನಾಕಾರರು ಒತ್ತಾಯ ಮಾಡಿದ್ದಾರೆ.

 


ಒಂದು ಕಮೆಂಟನ್ನು ಬಿಡಿ