ಬಸ್ ಸೌಲಭ್ಯ ಕಲ್ಪಿಸುವಂತೆ ಪ್ರತಿಭಟನೆ !


27-07-2017 299

ಮೈಸೂರು: ಬಸ್ ಸಮಸ್ಯೆಯಿಂದ ಬೇಸತ್ತ ವಿದ್ಯಾರ್ಥಿಗಳು ಸಮರ್ಪಕ ಬಸ್ ಸೌಲಭ್ಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನೆಡೆಸಿದ್ದಾರೆ. ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ಭಾರೀ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ವೇಳೆ, ರೊಚ್ಚಿಗೆದ್ದ ವಿದ್ಯಾರ್ಥಿಗಳು ಬಸ್ ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದೂ, ಬಸ್ ತಡೆದಿದ್ದರಿಂದ ಸ್ಥಳದಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತಲ್ಲದೇ, ರಸ್ತೆಯುದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೂಡಲೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ