ವೇಶ್ಯಾವಾಟಿಕೆ ಅಡ್ಡೆ: ಪೊಲೀಸರ ದಾಳಿ !


31-07-2017 264

ಮೈಸೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಮೈಸೂರು ಸಿ.ಸಿ.ಬಿ. ಹಾಗೂ ಕುವೆಂಪುನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರು ಯುವಕರನ್ನು ಬಂಧಿಸಿದ್ದೂ, ಓರ್ವ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್ ನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದೂ, ಖಚಿತ ಮಾಹಿತಿಯನ್ನಾಧರಿಸಿ ದಾಳಿ ನಡೆಸಿದ ಪೊಲೀಸರು, ಸಿದ್ದರಾಜು ಹಾಗೂ ಮಹದೇವನಾಯಕ ಎಂಬುವರನ್ನು ಬಂಧಿಸಿದ್ದಾರೆ. ಸದ್ಯ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದೂ, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. 

 


ಒಂದು ಕಮೆಂಟನ್ನು ಬಿಡಿ