ಅಮಿತ್ ಷಾ ವಿರುದ್ಧ ಪ್ರತಿಭಟನೆ !


31-07-2017 586

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಮಿಟಿ ಮಾಹಿತಿ ತಂತ್ರಜ್ಞಾನ ವಿಭಾಗದ ನೂರಾರು ಕಾರ್ಯಕರ್ತರು ಕುದುರೆ ಮೇಲೆ ಅಮಿತ್ ಷಾ ಹಾಗೂ ನರೇಂದ್ರ ಮೋದಿ ಭಾವಚಿತ್ರ ಇಟ್ಟು ವಿನೂತನವಾಗಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನ ಉದ್ದೇಶಿಸಿ ಮಾತನಾಡಿದ ಕಮಿಟಿ ಅಧ್ಯಕ್ಷ ವಿ ಶೇಖರ್, ಗುಜರಾತ್‍ನಲ್ಲಿ  ಬಿಜೆಪಿ ನಡೆಸುತ್ತಿರುವ ಶಾಸಕರ ಖರೀದಿಯಲ್ಲಿ ಅಮಿತ್ ಷಾ, ನೇತೃತ್ವವಹಿಸಿರುವುದು ಅದಕ್ಕೆ ಪ್ರಧಾನಿ ಮೋದಿ ಬೆಂಬಲ ಸೂಚಿಸುವ ಮೂಲಕ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಸಿಬಿಐ, ಇಡಿ ಹಾಗೂ ಅದಾಯ ತೆರಿಗೆ ಮೂಲಕ ಕಾಂಗ್ರೆಸ್ ಶಾಸಕರನ್ನು ಬೆದರಿಸುವ ತಂತ್ರಗಾರಿಕೆಯನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಅಲ್ಲದೆ, ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಸೋಲುವುದಾಗಿ ಹೆದರಿ ಕಾಂಗ್ರೆಸ್ ಶಾಸಕರ ಖರೀದಿಗೆ ಮುಂದಾಗಿದೆ ಎಂದು ಶೇಖರ್ ಹೇಳಿದರು. ಯೋಜನಾ ಮಂಡಳಿ ಸದಸ್ಯ ಜಿ.ಜನಾರ್ದನ್, ಯುವ ಕಾಂಗ್ರೆಸ್ ಮುಖಂಡರಾದ ಸಲೀಮ್, ಆನಂದ್, ರಾಮಕೃಷ್ಣ, ರವಿ ಮುಂತಾದವರು ಪ್ರತಿಭಟನೆಯಲ್ಲಿ ಹಾಜರಿದ್ದರು.

 


ಒಂದು ಕಮೆಂಟನ್ನು ಬಿಡಿ