ಬಸ್ ಗಳ ನಡುವೆ ಸಿಕ್ಕಿ ವ್ಯಕ್ತಿ ದುರ್ಮರಣ !


08-08-2017 1151

ಬೆಂಗಳೂರು: ಯಶವಂತಪುರದ ಬಿಎಂಟಿಸಿ ಬಸ್ ನಿಲ್ದಾಣದ ಸಿಗ್ನಲ್ ಬಳಿ, ಬಿಎಂಟಿಸಿ ಹಾಗೂ ಕೆ.ಎಸ್‍.ಆರ್.ಟಿ.ಸಿ ಬಸ್‍ಗಳ ನಡುವೆ ಸಿಕ್ಕಿ ಹಾಕಿಕೊಂಡು ಯುವಕನೊಬ್ಬ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಮೃತಪಟ್ಟವರನ್ನು ಸುಬೇದಾರ್ ಪಾಳ್ಯದ ಹಾಜಿ ಅಲಿ (21) ಎಂದು ಗುರುತಿಸಲಾಗಿದೆ, ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಅಲಿ, ಯಶವಂತಪುರ ಬಸ್ ನಿಲ್ದಾಣದ ಹೊರ ಭಾಗದ ಸಿಗ್ನಲ್ ಬಳಿ ರಸ್ತೆ ದಾಟಲು ನಿಂತಿದ್ದಾಗ ಹಿಂದಿನಿಂದ ಬಿಎಂಟಿಸಿ ಬಸ್ ಹಾಗೂ ಪಕ್ಕದಲ್ಲಿ ಬಂದ ಕೆ.ಎಸ್‍.ಆರ್.ಟಿ.ಸಿ ಬಸ್ ಗಳ ನಡುವೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿರುವ ಯಶವಂತಪುರ ಸಂಚಾರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


ಒಂದು ಕಮೆಂಟನ್ನು ಬಿಡಿ