ಅನುದಾನ ರದ್ದು, ವಿದ್ಯಾರ್ಥಿಗಳ ಪ್ರತಿಭಟನೆ !


11-08-2017 874

ದಕ್ಷಿಣ ಕನ್ನಡ: ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ, ಶಾಲೆಗಳಿಗೆ ಅನುದಾನ ರದ್ದು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ತಾಲ್ಲೂಕು ಕಚೇರಿ ಮುಂಭಾಗ ಮಕ್ಕಳು ಮತ್ತು ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ನಲ್ಲಿರು ಕಚೇರಿ ಮುಂದೆ, ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಭಾರಿ ಪ್ರತಿಭಟನೆ ನಡೆಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ, ಕಲ್ಲಡ್ಕ ಪ್ರಭಾಕರ ಭಟ್ ಅವರ ಅಧ್ಯಕ್ಷತೆಯ, ಶ್ರೀರಾಮ ವಿದ್ಯಾ ಕೇಂದ್ರ ಮತ್ತು ಶ್ರೀದೇವಿ ವಿದ್ಯಾಕೇಂದ್ರಗಳಿಗೆ ಬರುತ್ತಿದ್ದ ಕೊಲ್ಲೂರು ದೇವಸ್ಥಾನದ ಅನುದಾನವನ್ನು ಸರ್ಕಾರ ಸ್ಥಗಿತಗೊಳಿಸಿದೆ. ಇದರಿಂದ ಕೆರಳಿದ ವಿದ್ಯಾರ್ಥಿಗಳು ಅನ್ನದ ತಟ್ಟೆ ಬಡಿದು ಪ್ರತಿಭಟಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನುದಾನ ಕಡಿತದಿಂದ ಮಧ್ಯಾಹ್ನದ ಬಿಸಿಯೂಟಕ್ಕೆ ಶಾಲಾ ಮಕ್ಕಳಿಗೆ ತೊಂದರೆಯಾಗುತ್ತಿದ್ದು, ಅನುದಾನವನ್ನು ನಿಲ್ಲಿಸಿರುವ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಅನುದಾನವನ್ನು ನಿಲ್ಲಿಸಕೂಡದು ಇದರಿಂದ ವಿದ್ಯಾರ್ಥಿಗಳಿಗೆ, ತೊಡಕುಂಟಾಗಲಿದೆ, ಆದ್ದರಿಂದ ಅನುದಾನ ನೀಡುವುದನ್ನು ಮುಂದುವರಿಸುವಂತೆ ಪೋಷಕರು ಒತ್ತಾಯಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ