ಪ್ರಮಾಣ ವಚನ ಸ್ವೀಕರಿಸಿದ ವೆಂಕಯ್ಯನಾಯ್ಡು


11-08-2017 371

ನವದೆಹಲಿ: ಭಾರತದ 13ನೇ ಉಪರಾಷ್ಟ್ರಪತಿಯಾಗಿ ವೆಂಕಯ್ಯನಾಯ್ಡು ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ಇಂದು ಬೆಳಗ್ಗೆ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ಪ್ರಮಾಣವಚನ ಬೋಧಿಸಿದರು. ಪ್ರಧಾನಿ ನರೇಂದ್ರ ಮೋದಿ, ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಕೇಂದ್ರ ಸಚಿವರು ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭದಲ್ಲಿ ಹಾಜರಿದ್ದರು. ಪ್ರಮಾಣವಚನ ಸ್ವೀಕರಿಸಿ ಮಾತನಾಡಿದ ವೆಂಕಯ್ಯನಾಯ್ಡು, ಈ ಹುದ್ದೆಯ ಗೌರವವನ್ನು ಎತ್ತಿಹಿಡಿಯಲು ಶ್ರಮಿಸುವುದಾಗಿ ನುಡಿದರು.


ಒಂದು ಕಮೆಂಟನ್ನು ಬಿಡಿ