ಭೀಕರ ರಸ್ತೆ ಅಪಘಾತ 4 ಸಾವು !


17-08-2017 1058

ಚಿತ್ರದುರ್ಗ: ಲಾರಿ ಮತ್ತು ಆಟೋ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನ ಹರ್ತಿಕೋಟೆ ಬಳಿ ಮಧ್ಯರಾತ್ರಿ ಈ ಅವಘಡ ಸಂಭವಿದೆ. ಅತಿವೇಗವೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಮೃತರು ಹಿರಿಯೂರು ಪಟ್ಟಣದ ಸಮೀಪವಿರುವ ನಂಜಯ್ಯನ ಕೊಟ್ಟಿಗೆ ವಾಸಿಗಳಾಗಿದ್ದು, ಆಟೋದಲ್ಲಿದ್ದ ಆರು ಜನರ ಪೈಕಿ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


ಒಂದು ಕಮೆಂಟನ್ನು ಬಿಡಿ