ಅನುಮಾನಾಸ್ಪದವಾಗಿ ವ್ಯಕ್ತಿ ಸಾವು..?


18-08-2017 995

ರಾಮನಗರ: ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ, ರಾಮನಗರದಲ್ಲಿ  ನಡೆದಿದೆ. ಮೂರ್ತಿ ಅಲಿಯಾಸ್ ಕುಳ್ಳಯ್ಯ (50) ಮೃತ ವ್ಯಕ್ತಿ. ಕನಕಪುರ ತಾಲ್ಲೂಕಿನ ಹಾರೋಹಳ್ಳಿಯ, ದೇವರ ಕಗ್ಗಲ ಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಆದರೆ ಮೃತ ವ್ಯಕ್ತಿಯ ಸಂಬಂಧಿಕರು ಇದು ಕೊಲೆ ಎಂದು ಆರೋಪಿಸಿದ್ದಾರೆ. ಎರಡನೇ ವಿವಾಹವಾಗಿದ್ದ ಮೃತ ವ್ಯಕ್ಯಿ ಕುಳ್ಳಯ. ನಿನ್ನೆ ತಡರಾತ್ರಿ ಹೆಂಡತಿಯ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಹಾರೋಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದೂ, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


ಒಂದು ಕಮೆಂಟನ್ನು ಬಿಡಿ