ಬ್ಯಾರಿಕೇಟ್ ಗೆ ಬೈಕ್ ಡಿಕ್ಕಿ: ಸವಾರ ಸಾವು !


23-08-2017 1169

ವಿಜಯಪುರ: ನಿಯಂತ್ರಣ ತಪ್ಪಿ ಬ್ಯಾರಿಕೇಡ್ ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಗಂಗೂರ ಕ್ರಾಸ್ ಬಳಿ ಘಟನೆ ನಡೆದಿದೆ. ಮುದ್ದೇಬಿಹಾಳದ ನಿವಾಸಿ ಶ್ರೀಶೈಲ ಮೋಟಗಿ(32) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ವಿಜಯಪುರದ ನಿವಾಸಿಯಾದ ಶ್ರೀಶೈಲ ಮೋಟಗಿ ಅವರು, ಬೈಕ್ ನಲ್ಲಿ ಬರುತ್ತಿರುವ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿ ಇಡಲಾಗಿದ್ದ ಬ್ಯಾರಿಕೇಟ್ ಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದ ಅವರ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


ಒಂದು ಕಮೆಂಟನ್ನು ಬಿಡಿ