ಸಚಿವ ಸ್ಥಾನಕ್ಕೆ: ಬೆಂಬಲಿಗರ ಪ್ರತಿಭಟನೆ !


23-08-2017 1068

ಹುಬ್ಬಳ್ಳಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಈಗಾಗಲೇ ಲಾಬಿ ಶುರುವಾಗಿದ್ದೂ, ತಮ್ಮ ನಾಯಕನಿಗೆ ಸಚಿವ ಸ್ಥಾನ ನೀಡುವಂತೆ ಕೆಲವೆಡೆ ಪ್ರತಿಭಟನೆಗಳು ನಡೆದಿವೆ. ಇನ್ನು, ಸಿ.ಎಸ್.ಶಿವಳ್ಳಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಒತ್ತಾಯಿಸಿ, ಕುರುಬ ಸಮಾಜದವರಿಂದ ಹುಬ್ಬಳ್ಳಿ ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸಿ.ಎಸ್.ಶಿವಳ್ಳಿ, ಕುಂದಗೊಳ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ನಿಷ್ಠಾವಂತ ರಾಜಕಾರಣಿ ಶಿವಳ್ಳಿಗೆ ಸಚಿವ ಸ್ಥಾನ ನೀಡುವಂತೆ ಬೆಂಬಲಿಗರು ಆಗ್ರಹಿಸಿದ್ದಾರೆ. ನಗರದ ಕಿತ್ತೂರ ಚನ್ನಮ್ಮ ವೃತ್ತದಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಪಾರ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸಿ, ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದರು. ಚನ್ನಮ್ಮ ವೃತ್ತದಿಂದ ಮಿನಿ ವಿಧಾನಸೌಧದ ವರೆಗೂ ಮೆರವಣಿಗೆ ನಡೆಸಿ, ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ