ಬೆಸ್ಕಾಂ ಸಿಬ್ಬಂದಿ-ಸಾರ್ವಜನಿಕರ ನಡುವೆ ಮಾರಾಮಾರಿ !


29-08-2017 390

ಕೋಲಾರ: ಬೆಸ್ಕಾಂ ಸಿಬ್ಬಂದಿ ಹಾಗೂ ಸಾರ್ವಜನಿಕರ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ನಾಲ್ಕು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೋಲಾರ ನಗರದ ದೇವಾಂಗಪೇಟೆ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಬಿಲ್ ಪಾವತಿಸದ ಮನೆಗಳ ವಿದ್ಯುತ್ ಕಡಿತಗೊಳಿಸಲು ಮುಂದಾದಾಗ, ಮಾತಿನಚಕಮತಿ ನಡೆದು  ಈ ವೇಳೆ ಬೆಸ್ಕಾಂ ಸಿಬ್ಬಂದಿ ಹಾಗೂ ಸಾರ್ವಜನಿಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಇಬ್ಬರು ಬೆಸ್ಕಾಂ ಸಿಬ್ಬಂದಿ ಹಾಗೂ ಇಬ್ಬರು ಸಾರ್ವಜನಿಕರು ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಖಂಡಿಸಿ ಬೆಸ್ಕಾಂ ಕಛೇರಿ ಎದುರು ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ. ಕೋಲಾರ ನಗರದ ಗಲ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಒಂದು ಕಮೆಂಟನ್ನು ಬಿಡಿ