ಹೆಬ್ಬಾಳ್ಕರ್ ಅವರನ್ನು ಗಡಿಪಾರು ಮಾಡಬೇಕು..?


02-09-2017 1062

ಮೈಸೂರು: ಕನ್ನಡ ವಿರೋಧಿ ಹೇಳಿಕೆ ನೀಡಿರುವ ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕೆಂದು, ಆಗ್ರಹಿಸಿ ಮೈಸೂರಿನಲ್ಲಿಂದು ಕನ್ನಡ ವೇದಿಕೆ ಸಂಘಟನೆ ಕಾರ್ಯಕರ್ತರು ಕಾಡಾ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯದ ರಾಜಕಾರಣಿಯಾಗಿದ್ದುಕೊಂಡು ರಾಜ್ಯದ ವಿರುದ್ಧವಾಗಿ ಹೇಳಿಕೆ ನೀಡಿರುವುದು ಖಂಡನೀಯ. ರಾಜ್ಯದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂ.ಇ.ಎಸ್. ಕಾರ್ಯಕರ್ತರ ಪುಂಡಾಟಿಕೆ ತಾರಕಕ್ಕೇರಿರುವ ಸಂದರ್ಭದಲ್ಲಿ ಲಕ್ಷ್ಮೀಹೆಬ್ಬಾಳ್ಕರ್ ಈ ರೀತಿಯ ಹೇಳಿಕೆ ನೀಡಿರುವುದು ಸರಿಯಲ್ಲ. ಗೊಂದಲದ ಹೇಳಿಕೆಗಳನ್ನು ನೀಡುತ್ತಾ ಸಮಾಜದ ಶಾಂತಿ ಕದಡುತ್ತಿರುವ ಪುಂಡ ಮರಾಠಿಗಳ ಬೆಂಗಾವಲಿಗೆ ನಿಂತಿರುವ ಇಂಥ ರಾಜಕಾರಣಿಗಳಿಂದ ಬೆಳಗಾವಿಯಲ್ಲಿ ಕನ್ನಡ ಭಾಷೆ ಹಾಗೂ ಕನ್ನಡಿಗರ ರಕ್ಷಣೆಯನ್ನು ನಿರೀಕ್ಷಿಸಲು ಸಾಧ್ಯವೇ? ಹೀಗಾಗಿ ಕೂಡಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಲಕ್ಷ್ಮೀ ಹೆಬ್ಬಾಳ್ಕರ್ ರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಾಹಿತಿ ಬನ್ನೂರು ಕೆ.ರಾಜು, ಕನ್ನಡ ವೇದಿಕೆ ಅಧ್ಯಕ್ಷ ಎಸ್.ಬಾಲಕೃಷ್ಣ ಸೇರಿದಂತೆ ಇತರರು ಪಾಲ್ಗೊಂಡಿದ್ದರು.


ಒಂದು ಕಮೆಂಟನ್ನು ಬಿಡಿ