ಮಂಗಳೂರಲ್ಲಿ ಬೈಕ್ ಜಾಥಾ


05-09-2017 432

 ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ತರುವಂತಹ ಸಾಧ್ಯತೆಗಳು ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 5ರ ಬೆಳಿಗ್ಗೆ 6ರಿಂದ ಸೆಪ್ಟಂಬರ್ 7ರ ಬೆಳಿಗ್ಗೆ 6 ಗಂಟೆವರೆಗೆ ಮಂಡ್ಯ ವ್ಯಾಪ್ತಿಯಲ್ಲಿ ಯಾವುದೇ ಸಂಘಟನೆಗಳ ಸದಸ್ಯರು, ವ್ಯಕ್ತಿಗಳು ಯಾವುದೇ ರೀತಿಯ ದ್ವಿಚಕ್ರ ವಾಹನ, ಬೈಕ್ ಇತ್ಯಾದಿ ವಾಹನಗಳ ಮೂಲಕ  ಜಾಥ, ಮೆರವಣಿಗೆ, ಪ್ರತಿಭಟನೆ, ಪಾದಯಾತ್ರೆ ನಡೆಸದಂತೆ  ನಿಷೇಧಾಜ್ಞೆಯನ್ನು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಅವರ ಶಿಫಾರಸ್ಸು ಮೇರೆಗೆ ಮಂಡ್ಯ ಜಿಲ್ಲಾಧಿಕಾರಿ  ಎನ್.ಮಂಜುಶ್ರೀ ಅವರು ಆದೇಶ ಹೊರಡಿಸಿದ್ದಾರೆ.