ಗೌರಿ ಹತ್ಯೆ: ಭುಗಿಲೆದ್ದ ಆಕ್ರೋಶ !


06-09-2017 779

ದೊಡ್ಡಬಳ್ಳಾಪುರ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ, ದೊಡ್ಡಬಳ್ಳಾಪುರದಲ್ಲಿ ಆಕ್ರೋಶ ಭುಗಿಲೆದ್ದಿದೆ. ಸಿಪಿಐ(ಎಂ), ಕನ್ನಡ ಪಕ್ಷ, ಕರವೇ ಇನ್ನಿತರೆ ಸಂಘಟನೆಗಳಿಂದ ನಗರದ ಹಳೇ ಬಸ್ ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಕೊಲೆಗಡುಕರನ್ನು ಬಂಧಿಸಿ, ಕಠಿಣ ಶಿಕ್ಷೆಗೊಳಪಡಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿ ಬೃಹತ್ ಪ್ರತಿಭಟನೆ ನಡೆಸಿದರು, ಪ್ರತಿಭಟನಾ ವೇಳೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಹಂತಕರನ್ನು ಬಂಧಿಸುವಂತೆ ಒತ್ತಾಯಿಸಿದರು.  


ಒಂದು ಕಮೆಂಟನ್ನು ಬಿಡಿ