ಬ್ಯಾಂಕ್ ಗೆ ಬೀಗ ಜಡಿದು ಪ್ರತಿಭಟನೆ !


11-09-2017 1306

ಧಾರವಾಡ: ರೈತರ ಬೆಳೆ ವಿಮೆ ಪರಿಹಾರ ನೀಡುವಂತೆ ಆಗ್ರಹಿಸಿ, ರೈತರು ಪ್ರತಿಭಟನೆ ನಡೆಸಿದ್ದಾರೆ. ಧಾರವಾಡ ತಾಲ್ಲೂಕಿನ ಮುಗದ ಗ್ರಾಮದ, ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್ (ಕೆವಿಜಿ) ಮುಂದೆ ಪ್ರತಿಭಟನೆ ನಡೆಸಿದ ರೈತರು, ಈ ವೇಳೆ ಪ್ರತಿಭಟನೆಗೆ ಸೂಕ್ತ ರೀತಿಯಲ್ಲಿ ಪ್ರತಿಕ್ರಿಯಿಸದ ಬ್ಯಾಂಕ್ ಸಿಬ್ಬಂದಿ ವಿರುದ್ಧ ಕೆರಳಿ, ಸಿಬ್ಬಂದಿಯನ್ನು ಹೊರ ಹಾಕಿ, ಬ್ಯಾಂಕ್ ಗೆ ಬೀಗ ಜಡಿದು ಪ್ರತಿಭಟಿಸಿದ್ದಾರೆ. ಕೂಡಲೆ ಬೆಳೆ ವಿಮೆ ಪರಿಹಾರ ಹಣವನ್ನು ರೈತರಿಗೆ ನೀಡುವಂತೆ ಒತ್ತಾಯಿಸಿದರು.


ಒಂದು ಕಮೆಂಟನ್ನು ಬಿಡಿ