ಸಾಲಬಾಧೆ: ರೈತ ಆತ್ಮಹತ್ಯೆ


12-09-2017 809

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ, ಶ್ರೀನಗರ ಕ್ಯಾಂಪಿನ ಅಜಯ್ ಕುಮಾರ್(55) ಎನ್ನುವ ರೈತರೊಬ್ಬರು, ಸಾಲಬಾಧೆ ತಾಳಲಾರದೆ ವಿಷ ಸೇವಿಸಿ, ಮೃತಪಟ್ಟಿರುವ ಘಟನೆ ತಡರಾತ್ರಿ ನಡೆದಿದೆ. ಮೃತ ರೈತನಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಪತ್ನಿಯನ್ನು ಅಗಲಿದ್ದಾರೆ. ಮೃತನು ತನ್ನ 7.5 ಎಕರೆ ಜಮೀನಿನ ಮೇಲೆ ಖಾಸಗಿಯಾಗಿ ಐದು ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಸಿರುಗುಪ್ಪ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಸ್ಥಳಕ್ಕೆ ಪಿಎಸ್ಐ ರಘು ಹಾಗೂ ಸಿಬ್ಬಂದಿ ತೆರಳಿ ಪರಿಶೀಲಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.                       


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

ಬಳ್ಳಾರಿ ಸಾಲಬಾಧೆ ರೈತ ಆತ್ಮಹತ್ಯೆ !