ಅಕ್ರಮ ಸಾರಾಯಿ ಮಾರಾಟ: ವ್ಯಕ್ತಿ ಬಂಧನ !


12-09-2017 814

ಹುಬ್ಬಳ್ಳಿ: ಅಕ್ರಮವಾಗಿ ಸರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಯಲ್ಲಪ್ಪ ತಮ್ಮನ್ನ ಕಲಾಲ ಬಂಧಿತ ವ್ಯಕ್ತಿ. ಹುಬ್ಬಳ್ಳಿ ಧಾರವಾಡ ಸಿಸಿಬಿ ಪೊಲೀಸರ ಕಾರ್ಯಾಚರಣೆಯಿಂದ, ಹುಬ್ಬಳ್ಳಿಯ ಸೋನಿಯಾ ಗಾಂಧಿ ನಗರದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ವಿವಿಧ ಕಂಪನಿಗಳ 21 ಲೀಟರ್ ಮಧ್ಯ ವಶಪಡಿಸಿಕೊಂಡಿದ್ದಾರೆ. ಸಿಸಿಬಿ ಪೊಲೀಸ್ ಅಧಿಕಾರಿ ಪುಟ್ಟಸ್ವಾಮಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು, ಹತ್ತು ಸಾವಿರ ಮೌಲ್ಯದ ಸರಾಯಿ ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. 


ಒಂದು ಕಮೆಂಟನ್ನು ಬಿಡಿ