ಕಳಪೆ ಕಾಮಗಾರಿ: ಬಿಜೆಪಿ ಪ್ರತಿಭಟನೆ !


12-09-2017 886

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ, ಮೈಸೂರು ನಗರದಲ್ಲಿ ನಡೆಯುತ್ತಿರುವ ರಸ್ತೆ ದುರಸ್ತಿ ಕಾಮಗಾರಿಗಳು ಕಳಪೆಯಿಂದ ಕೂಡಿವೆ ಎಂದು ಆರೋಪಿಸಿ, ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ ನಡೆಸಿದ್ದಾರೆ. ಮೈಸೂರಿನ ಕೇಂದ್ರ ಬಸ್ ನಿಲ್ದಾಣದ ಬಳಿ ಜಮಾಯಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ದಸರಾ ಸಂಬಂಧ ಮೈಸೂರಿನಲ್ಲಿ ನಡೆಯುತ್ತಿರುವ ರಸ್ತೆ ದುರಸ್ತಿ ಕಾಮಗಾರಿಗಳು ಅತ್ಯಂತ ಕಳಪೆಯಾಗಿವೆ ಎಂದು ಆರೋಪಿಸಿ ಘೋಷಣೆಗಳನ್ನು ಕೂಗಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕೋಪಯೋಗಿ ಸಚಿವ ಡಾ.ಎಚ್.ಸಿ ಮಹದೇವಪ್ಪ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಕೂಡಲೆ ಕಳಪೆ ಕಾಮಗಾರಿಗಳನ್ನು ಸರಿಪಡಿಸುವಂತೆ ಒತ್ತಾಯಿಸಿದ್ದಾರೆ.  

 

 

 


ಒಂದು ಕಮೆಂಟನ್ನು ಬಿಡಿ