ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳ ಪ್ರತಿಭಟನೆ !


13-09-2017 513

ಧಾರವಾಡ: ಪ್ಯಾರಾ ಮೆಡಿಕಲ್ ಪ್ರಥಮ ವರ್ಷದ ಪರೀಕ್ಷೆಯಲ್ಲಿ, ಖಾಸಗಿ ಕಾಲೇಜು ವಿದ್ಯಾರ್ಥಿಗಳಿಗೆ ನಕಲು ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿ, ಸರ್ಕಾರಿ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು, ಧಾರವಾಡದ ಜಿಲ್ಲಾ ಆಸ್ಪತ್ರೆಯ ಮುಂದೆ ಭಾರೀ ಪ್ರತಿಭಟನೆ ನಡೆಸಿದ್ದಾರೆ. ನಿನ್ನೆ ನಡೆದಿರುವ ಪರೀಕ್ಷೆಯಲ್ಲಿ, ಖಾಸಗಿ ಕಾಲೇಜ್ ವಿದ್ಯಾರ್ಥಿಗಳಿಗೆ ನಕಲಿಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು ಈ ಕುರಿತು ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ