ಜನಜಾಗೃತಿ ಚೈತನ್ಯ ರಥಯಾತ್ರೆ !


20-09-2017 953

ಕೊಪ್ಪಳ: ಕೊಪ್ಪಳದ ಕುಷ್ಟಗಿಯಲ್ಲಿ ಜನಜಾಗೃತಿ ಚೈತನ್ಯ ರಥಯಾತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಿದರು. ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ, ಕೃಷ್ಣಾ ‘ಬಿ ಸ್ಕೀಂ’ ಹಾಗೂ ಸಿಂಗಟಾಲೂರ ಏತ ನೀರಾವರಿ ಯೋಜನೆ ಜಾರಿಗೆ ಆಗ್ರಹಿಸಿ ಬೃಹತ್ ಬಹಿರಂಗ ಸಭೆ ನಡೆಸಿದ್ದು, ಕಾರ್ಯಕ್ರಮ ದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಚಿವರಾದ ಬಸವರಾಜ ಬೊಮ್ಮಾಯಿ, ಲಕ್ಷಣ ಸವದಿ, ಶ್ರೀರಾಮುಲು, ಗೋವಿಂದ ಕಾರಜೋಳ, ಸಂಸದ ಸಂಗಣ್ಣ ಕರಡಿ, ಶಾಸಕ ದೊಡ್ಡನಗೌಡ ಪಾಟೀಲ್ ಮತ್ತಿತರು ಭಾಗಿಯಾಗಿದ್ದರು. ಅಲ್ಲದೇ ಸಾವಿರಾರು ಬಿಜೆಪಿ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.


ಒಂದು ಕಮೆಂಟನ್ನು ಬಿಡಿ