ಹೋರಾಟ ನಿಲ್ಲಿಸುವ ಪ್ರಶ್ನೆಯೇ ಇಲ್ಲ..!


22-09-2017 322

ಹುಬ್ಬಳ್ಳಿ: ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರದ ಕುರಿತಂತೆ, ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಸಚಿವ ವಿನಯ್ ಕುಲಕರ್ಣಿ ಹೇಳಿದ್ದಾರೆ. ಧಾರವಾಡದ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ವಿನಯ್ ಕುಲಕರ್ಣಿ ಮಾತನಾಡಿ, ನ್ಯಾಯ ಸಿಗುತ್ತದೆ ಎಂಬ ಭರವಸೆ ನಮಗೆ ಇದೆ,  ಹೀಗಾಗಿ ಯಾವುದೇ ಕಾರಣಕ್ಕೂ ಹೋರಾಟವನ್ನು ನಿಲ್ಲಿಸುವುದಿಲ್ಲ, ಯಾವುದೇ ಕಾರಣಕ್ಕೂ ಹೋರಾಟವನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಸೆಪ್ಟೆಂಬರ್ 24 ರಂದು ಗುಲ್ಬಾರ್ಗಾದಲ್ಲಿ ಬೃಹತ್ ರ‍್ಯಾಲಿಯನ್ನು ಮಾಡಲಾಗುತ್ತಿದೆ, ರ‍್ಯಾಲಿಯಲ್ಲಿ ಎಲ್ಲಾ ಲಿಂಗಾಯತ ಮುಖಂಡರು ಅಪಾರ ಸಂಖ್ಯೆಯಲ್ಲಿ ಸಮುದಾಯದವರು ಪಾಲ್ಗೊಳ್ಳಲ್ಲಿದ್ದಾರೆ ಎಂದು ತಿಳಿಸಿದರು.

ನಾವೆಲ್ಲರೂ ಒಂದಾಗಿ ಬಸವಣ್ಣನವರನ್ನು ಉಳಿಸುವ ಕೆಲಸವನ್ನು ಮಾಡುತ್ತೇವೆ, ಆದರೆ ಅವರನ್ನು ಹತ್ತಿಕ್ಕುವ ಕೆಲಸವನ್ನು ನೋಡಿದಾಗ ನಮ್ಮ ಮನಸ್ಸಿಗೆ ನೋವಾಗುತ್ತದೆ, ಹತ್ತಿಕ್ಕುವ ಉದ್ದೇಶದಿಂದ ಹೀಗೆ ಮಾಡಲಾಗುತ್ತಿದೆ ಆದರೆ ನಮಗೆ ಪ್ರತ್ಯೇಕವಾಗಿ ಧರ್ಮ ಬೇಕು ಹೋರಾಟವನ್ನು ಹತ್ತಿಕ್ಕಲು ಯಾವುದೇ ಬೆದರಿಕೆ ಹಾಕಿದರೂ ಹೆದರುವುದಿಲ್ಲ, ಬಗ್ಗುವುದಿಲ್ಲ ಎಂದು ಗುಡುಗಿದ್ದಾರೆ. ಹುಟ್ಟಿದ ಮೇಲೆ ಎಲ್ಲರೂ ಸಾಯೋದೆ, ಸಮಾಜಕ್ಕೇ ಏನಾದರೂ ಮಾಡಬೇಕು ಎನ್ನುವ ಉದ್ದೇಶ ನಮ್ಮದು ಎಂದರು.

 


ಒಂದು ಕಮೆಂಟನ್ನು ಬಿಡಿ