ಟ್ಯಾಂಕರ್ ಗೆ ಬಸ್ ಡಿಕ್ಕಿ ಇಬ್ಬರು ಸಾವು !


27-09-2017 1151

ಹಾವೇರಿ: ಸ್ಪಿರಿಟ್ ತುಂಬಿದ್ದ ಟ್ಯಾಂಕರ್‌ ಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಣೆಬೆನ್ನೂರಲ್ಲಿ ಸಂಭವಿಸಿದೆ. ಬಸ್‌ ನಲ್ಲಿದ್ದ ರಾಜಸ್ಥಾನ ಮೂಲದ ಅರವಿಂದ್‌ ಕೊಠಾರಿ ಮತ್ತು ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಹೆಸರು ತಿಳಿದುಬಂದಿಲ್ಲ. ಘಟನೆಯಲ್ಲಿ ಸುಮಾರು 30 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇವರೆಲ್ಲರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಒಂದು ಕಮೆಂಟನ್ನು ಬಿಡಿ