ಬಿಹಾರ-ಒಡಿಶಾದಲ್ಲಿ ಭಾರೀ ಮಳೆ ಸಾಧ್ಯತೆ..


10-10-2017 812

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಬಿಹಾರ ಮತ್ತು ಒಡಿಶಾ ರಾಜ್ಯಗಳಲ್ಲಿ ಪ್ರಬಲ ಚಂಡಮಾರುತ ಅಪ್ಪಳಿಸಲಿದ್ದು, ಮುಂದಿನ 48 ಗಂಟೆಗಳ ಅವಧಿಯಲ್ಲಿ ಭಾರೀ ಮಳೆಯಾಗುವ  ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಹವಾಮಾನ ಇಲಾಖೆ ಮಾಹಿತಿಯಂತೆ ಪಶ್ಚಿಮ ಬಂಗಾಳದಲ್ಲಿ ಗಂಗಾನದಿ ಹರಿಯುವ ಪ್ರದೇಶದ ವ್ಯಾಪ್ತಿಯಲ್ಲಿ ಉದ್ಭವಿಸಿರುವ ವಾಯುಭಾರ ಕುಸಿತ ಪರಿಸ್ಥಿತಿ ಮತ್ತಷ್ಟು ತೀವ್ರವಾಗಿದೆ. ಇದರಿಂದಾಗಿ ಬಿಹಾರ ಹಾಗೂ ಒಡಿಶಾದಲ್ಲಿ ಮುಂದಿನ 48 ಗಂಟೆಗಳ ಅವಧಿಯಲ್ಲಿ ಚಂಡಮಾರುತ ಹಾಗೂ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.

ಪ್ರಮುಖವಾಗಿ ಈಶಾನ್ಯ ರಾಜ್ಯಗಳು, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಕೊಂಕಣ, ಗೋವಾ, ತೆಲಂಗಾಣ, ರಾಯಲಸೀಮೆ, ಉತ್ತರ ಕರ್ನಾಟಕದ ಒಳನಾಡು ಮತ್ತು ತಮಿಳುನಾಡಿನಲ್ಲಿ ಭಾರಿ ಮಳೆಯಾಗುವ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

ಬಿಹಾರ ಒಡಿಶಾ ಭಾರೀ ಮಳೆ ತೆಲಂಗಾಣ