ಗೋವಾ ಸಚಿವರಿಗೆ ಎಂ.ಬಿ ಪಾಟೀಲ್ ಪತ್ರ !


13-10-2017 850

ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ವಿವಾದವನ್ನು ನ್ಯಾಯಾಧೀಕರಣದ ಹೊರಗೆ ಮಾತುಕತೆ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಸಂಬಂಧಪಟ್ಟ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯಲು ಮುಂದಾಗಬೇಕು ಎಂದು ರಾಜ್ಯದ ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್, ಗೋವಾ ಜಲಸಂಪನ್ಮೂಲ ಸಚಿವ ವಿನೋದ್ ಪಾಳ್ಯೇಕರ್ ಅವರಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ಇಂದು ಪತ್ರ ಬರೆದಿರುವ ಎಂ.ಬಿ ಪಾಟೀಲ್, ಎರಡೂ ರಾಜ್ಯಗಳ ಹಿತದೃಷ್ಟಿಯಿಂದ ಮುಖ್ಯಮಂತ್ರಿಗಳ ಸಭೆ ಕರೆದು ದಶಕಗಳಷ್ಟು ಹಳೆಯದಾದ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಸಹಕರಿಸುವಂತೆಯೂ ಕೋರಿದ್ದಾರೆ.

ನೆರೆ ರಾಜ್ಯಗಳಾದ ಕರ್ನಾಟಕ ಮತ್ತು ಗೋವಾದ ಜನತೆ ಶಾಂತಿ, ನೆಮ್ಮದಿಯಿಂದ ಸಹಬಾಳ್ವೆ ನಡೆಸಬೇಕಾಗಿದೆ. ಸಹಕಾರ ಒಕ್ಕೂಟ ವ್ಯವಸ್ಥೆಯಡಿ ನಾವೆಲ್ಲರೂ ಇರುವುದರಿಂದ ಇದೇ ಸ್ಫೂರ್ತಿಯಿಂದ ಉಭಯ ರಾಜ್ಯಗಳ ನಡುವಿನ ನೀರು ಹಂಚಿಕೆ ವಿವಾದವನ್ನು ಬಗೆಹರಿಸಿಕೊಳ್ಳಲು ಭೂಮಿಕೆ ಸಿದ್ಧಪಡಿಸುವುದು ಸಂವಿಧಾನಾತ್ಮಕ ಹೊಣೆಗಾರಿಕೆಯಾಗಿದೆ ಎಂದು ಎಂ.ಬಿ ಪಾಟೀಲ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ