‘ರಾಹುಲ್ ಎಐಸಿಸಿ ಅಧ್ಯಕ್ಷರಾಗಲಿದ್ದಾರೆ’..!


14-10-2017 841

ಬೆಂಗಳೂರು: ರಾಹುಲ್ ಗಾಂಧಿ ಕೆಲವೇ ದಿನಗಳಲ್ಲಿ ಎಐಸಿಸಿ ಅಧ್ಯಕ್ಷರಾಗಲಿದ್ದಾರೆ, ಕೆಪಿಸಿಸಿ ಸಹಾ ಇದರ ಪರವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ಲೈಂಗಿಕ ಶೋಷಣೆ ಆರೋಪದ ತನಿಖೆ ವಿಚಾರದ ಕುರಿತು ಪ್ರತಿಕ್ರಿಯಿಸಿ, ನಾನು 40 ವರ್ಷದಿಂದ ರಾಜಕಾರಣದಲ್ಲಿದ್ದೇನೆ, ಒಂದೇ ಇಂದು ಕಪ್ಪು ಚುಕ್ಕಿ ಇಲ್ಲಾ. ಈ ರೀತಿಯ ಆರೋಪ ವಿಪಕ್ಷಗಳು ಮೊದಲಿನಿಂದಲು ಮಾಡಿಕೊಂಡು ಬಂದಿದ್ದಾರೆ. ನಾನು ಚುನಾವಣೆಗೆ ನಿಂತಾಗ ಹೆಚ್ಚು ಅಪಪ್ರಚಾರ ಮಾಡಿದ್ದರು. ನನ್ನ ಮೇಲೆ ಆರೋಪ ಮಾಡಿರುವ ಮಹಿಳೆ ಮೇಲೆಯೇ 36 ಕ್ರಿಮಿನಲ್ ಕೇಸುಗಳಿವೆ, ಅವರು ನನ್ನ ಬಗ್ಗೆ ಆರೋಪ ಮಾಡಿದ್ದಾರೆ ಎಂದರು. ಅವರ ವಿರುದ್ಧ ಎರ್ನಾಕುಲಂ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ. ನಾನು ತಪ್ಪು ಮಾಡಿದ್ದೇನೆ ಎಂದು ಸಾಬೀತಾದರೆ ನಾನು ಸಾರ್ವಜನಿಕ ಜೀವನದಿಂದ ನಿವೃತ್ತಿ ಪಡೆಯುತ್ತೇನೆ ಎಂದರು.

ಇನ್ನು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಚಿವ ರೋಶನ್ ಬೇಗ್ ಅವಾಚ್ಯ ಶಬ್ದ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ, ನಾನು ಎಐಸಿಸಿಯ ಪರವಾಗಿ ಮಾತನಾಡುತ್ತಿದ್ದೇನೆ. ಬಿಜೆಪಿಯ ನಾಯಕರು ಇದಕ್ಕಿಂತ ಹೆಚ್ಚಾಗಿ ಕಾಮೆಂಟ್ ಮಾಡಿದ್ದಾರೆ. ರೋಷನ್ ಬೇಗ್ ಗಿಂತ ಕೆಟ್ಟದಾಗಿ ಮಾತನಾಡಿದ್ದು ಕೇಳಿದ್ದೇನೆ, ರೋಷನ್ ಬೇಗ್ ಉದ್ದೇಶ ಪೂರಕವಾಗಿ ಮಾತನಾಡಿಲ್ಲ. ಇದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ ಎಂದಿದ್ದು, ಆದರು ಸಹಾ ಇಂತಹ ಪದ ಬಳಕೆ ಸರಿ ಅಲ್ಲ ಎಂದರು.


ಒಂದು ಕಮೆಂಟನ್ನು ಬಿಡಿ