ದಕ್ಷಿಣ ಕನ್ನಡಕ್ಕೆ 10 ಇಂದಿರಾ ಕ್ಯಾಂಟೀನ್ !


18-10-2017 377

ಮಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಅತಿ ಕಡಿಮೆ ಬೆಲೆಗೆ ಊಟ- ತಿಂಡಿ ಪೂರೈಕೆ ಮಾಡುವ ಇಂದಿರಾ ಕ್ಯಾಂಟೀನ್‍ ಎಲ್ಲ ಜಿಲ್ಲೆಗಳು, ತಾಲ್ಲೂಕು ಕೇಂದ್ರಗಳಲ್ಲಿ ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದು, ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 10 ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗುವುದು. ಜನವರಿಯಲ್ಲಿ ಈ ಕ್ಯಾಂಟೀನ್ಗಳು  ಉದ್ಘಾಟನೆಯಾಗಲಿವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ 5, ಉಳ್ಳಾಲದಲ್ಲಿ 1, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ತಾಲೂಕು ಕೇಂದ್ರಗಳಲ್ಲಿ ತಲಾ 1 ಇಂದಿರಾ ಕ್ಯಾಂಟೀನ್‍ಗಳನ್ನು ಸ್ಥಾಪನೆ ಮಾಡಲಾಗುವುದು. ಜಾಗ ಗುರುತಿಸಲು ನಗರ ಸ್ಥಳೀಯ ಸಂಸ್ಥೆಗಳಿಗೆ ತಿಳಿಸಲಾಗಿದೆ ಎಂದರು.

ಪೌರಾಡಳಿತ ಇಲಾಖೆ ಇದರ ನೋಡಲ್ ಇಲಾಖೆಯಾಗಿ ಕಾರ್ಯ ನಿರ್ವಹಿಸಲಿದೆ. ಎಲ್ಲ ಕಟ್ಟಡಗಳನ್ನು ಒಂದೇ ಶೈಲಿಯಲ್ಲಿ ರಚನೆ ಮಾಡಲಾಗುವುದು. ಜಿಲ್ಲೆಯ ಬಡ ವರ್ಗಗಳಿಗೆ ಇದು ಅತಿ ಸಹಕಾರಿಯಾಗಲಿದೆ ಎಂದು  ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.


ಒಂದು ಕಮೆಂಟನ್ನು ಬಿಡಿ