ರೈಲು ತಡೆದು ಪ್ರತಿಭಟನೆ !


19-10-2017 287

ಕೋಲಾರ: ಮಾರಿಕುಪ್ಪಂ-ಬೆಂಗಳೂರು ಸ್ವರ್ಣ ಪ್ಯಾಸೆಂಜರ್ ರೈಲು ಬದಲಾವಣೆ ಹಾಗೂ ರೈಲಿನ ವೆಳಾಪಟ್ಟಿಯನ್ನು ಬದಲಾವಣೆ ಮಾಡಿರುವುದನ್ನು ವಿರೋಧಿಸಿದ ಪ್ರಯಾಣಿಕರು, ಕೆಜಿಎಫ್ ನಗರದ ಮಾರಿಕುಪ್ಪಂ ರೈಲು ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ರೈಲು ತಡೆದು ಪ್ರತಿಭಟನೆ ನಡೆಸಿದರು.

ಸಂಸದ ಕೆ.ಎಚ್.ಮುನಿಯಪ್ಪ ಅವರ ಪುತ್ರಿ ರೂಪಾ ಶಶಿಧರ್ ಅವರ ನೇತೃತ್ವದಲ್ಲಿ ದಲಿತ ಸಂಘಟನೆಗಳು, ಎಡ ಪಕ್ಷಗಳ ಕಾರ್ಯಕರ್ತರು ಹಾಗೂ ಪ್ರಯಾಣಿಕರು ಪ್ರತಿಭಟನೆ ನಡೆಸಿದರು. ಮುಂಜಾನೆಯ 6.30 ರ ಸ್ವರ್ಣ ಪ್ಯಾಸೆಂಜರ್ ರೈಲು ಬದಲಾಗಿ ಪುಷ್ ಪುಲ್ ರೈಲು ಹಾಕಿರುವುದು ಸರಿಯಲ್ಲ, ಬದಲಾದ ರೈಲಿನ ಬೋಗಿಗಳು ಕಡಿಮೆ ಇರುವ ಕಾರಣ ಪ್ರತಿನಿತ್ಯ ಹೊಟ್ಟೆಪಾಡಿಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವವರಿಗೆ ಬಹಳಷ್ಟು ತೊಂದರೆಯಾಗುತ್ತಿದೆ, ಜೊತೆಗೆ ವೇಳಾಪಟ್ಟಿಯನ್ನೂ ಬದಲಾಯಿಸಿರುವುದರಿಂದ ಸಾಕಷ್ಟು ತೊಂದರೆಯಾಗಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು,  ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದರು. ಇದರಿಂದ ಆ ಮಾರ್ಗದಲ್ಲಿ ಸಂಚರಿಸುವ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಯಿತು.

ಪ್ರತಿಭಟನೆ ಕೈ ಬಿಡುವಂತೆ ಪೊಲೀಸರು ಮಾಡಿದ ಮನವಿಗೆ ಹೋರಾಟಗಾರರು ಸ್ಪಂದಿಸದ ಹಿನ್ನೆಲೆಯಲ್ಲಿ, ಪೊಲೀಸರು ಲಾಠಿಚಾರ್ಜ್ ಮಾಡಿದರು, ಇದರಿಂದ ಹಲವು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ.


ಒಂದು ಕಮೆಂಟನ್ನು ಬಿಡಿ