ಭೀಕರ ರಸ್ತೆ ಅಪಘಾತ ನಾಲ್ವರ ಸಾವು !


21-10-2017 1073

ಬಳ್ಳಾರಿ: ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆಯ, ಬಳ್ಳಾರಿಯಲ್ಲಿ ಸಂಭವಿಸಿದೆ. ಅಲ್ಲದೇ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಹೊಸಪೇಟೆ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೊಸಪೇಟೆ ತಾಲ್ಲೂಕಿನ ಪಿ.ಕೆ ಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 14ರಲ್ಲಿ ಈ ಭೀಕರ ಅಪಘಾತ ನಡೆದಿದೆ. ಇನ್ನು ಸ್ಥಳಕ್ಕೆ ಹೊಸಪೇಟೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯ ಕಾರಣ ಎಂದು ಶಂಕಿಸಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.


ಒಂದು ಕಮೆಂಟನ್ನು ಬಿಡಿ