ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ: ಅಧ್ಯಕ್ಷರಿಗೆ ಐಟಿ ಶಾಕ್ !


24-10-2017 794

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ಆಪ್ತರಾದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್ ಅವರ ನಿವಾಸದ ಮೇಲೆ ಐ.ಟಿ. ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಸವೇಶ್ವರ ನಗರ, ಸದಾಶಿವನಗರ ಸೇರಿದಂತೆ 5 ಕಡೆಯ ನಿವಾಸ ಮತ್ತು ಕಚೇರಿಗಳ ಮೇಲೆ ಏಕಕಾಲಕ್ಕೆ ಐ.ಟಿ. ಅಧಿಕಾರಿಗಳು ದಾಳಿ ನಡೆಸಿ, ದಾಖಲೆ ಪರಿಶೀಲನೆ ನಡೆಸಿದ್ದಾರೆ. ಬೆಳಿಗ್ಗೆ 7 ಗಂಟೆಯಿಂದ 50 ಕ್ಕೂ ಅಧಿಕ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದು, ಮಹತ್ವದ ದಾಖಲೆಗಳ ಪರಿಶೀಲಿನೆಯಲ್ಲಿ ತೊಡಗಿದ್ದಾರೆ.


ಒಂದು ಕಮೆಂಟನ್ನು ಬಿಡಿ