ಕೆರೆಯಲ್ಲಿ ಪ್ರಾಣ ಕಳೆದುಕೊಂಡ ಬಾಲಕ


27-10-2017 536

ಬೆಂಗಳೂರು: ನಗರದ ಹೊರವಲಯದ ಆನೇಕಲ್ ಬಳಿಯ ಬೆಸ್ತಮಾನಹಳ್ಳಿ ಕೆರೆಯಲ್ಲಿ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಸ್ತಮಾನಹಳ್ಳಿಯ ರಾಕೇಶ್ (15)ಎಂದು ಮೃತ ಬಾಲಕನನ್ನು ಗುರುತಿಸಲಾಗಿದೆ. ಬೆಸ್ತಮಾನಹಳ್ಳಿಯ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ರಾಕೇಶ್, ನಿನ್ನೆ ಸಂಜೆ ಕೆರೆಯಲ್ಲಿ ಈಜಲು ಹೋಗಿ ಮುಳುಗಿ ಮೃತಪಟ್ಟಿದ್ದಾನೆ. ಕೆರೆ ಬಳಿ ಹೋದವನು ಎಷ್ಟು ಹೊತ್ತಾದರೂ ಬಾರದೇ ಇದ್ದರಿಂದ ಆತಂಕಗೊಂಡು ಹುಡುಕಾಟ ನಡೆಸಿದರೂ ಆತ ಪತ್ತೆಯಾಗಿಲ್ಲ, ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಕೆರೆಯಲ್ಲಿ ಹುಡುಕಾಟ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಒಂದು ಕಮೆಂಟನ್ನು ಬಿಡಿ