‘ಸಿದ್ದರಾಮಯ್ಯ ಮತ್ತೆ ಸಿಎಂ ಆದರೆ ಏನು ತಪ್ಪು'


28-10-2017 1399

ಕಲಬುರ್ಗಿ: ಮುಂದಿನ ಬಾರಿಯೂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲು ನನ್ನ ಸಂಪೂರ್ಣ ಬೆಂಬಲವಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆದರೆ ತಪ್ಪೇನಿದೆ..?ಎಂದು ಪ್ರಶ್ನಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದಲ್ಲಿ  ಚುನಾವಣೆ ನಡೆಯುವಾಗ ಅವರೇ ಮುಂದಿನ ಬಾರಿಯೂ ಮುಖ್ಯಮಂತ್ರಿ ಆದರೆ ಒಳ್ಳೆಯದು ಎಂದರು. ಮುಖ್ಯಮಂತ್ರಿ ಆಗುವ ಆಕಾಂಕ್ಷೆ ನಾನು ಸೇರಿ ಎಲ್ಲರಿಗೂ ಇರುತ್ತದೆ. ಆದರೆ ಯಾರ ಹಣೆ ಬರಹದಲ್ಲಿ ಬರೆದಿದೆಯೋ ಅವರು ಮುಖ್ಯಮಂತ್ರಿ ಆಗುತ್ತಾರೆ. ಸಿದ್ದರಾಮಯ್ಯ ಹಣೆಬರಹದಲ್ಲಿ ಬರೆದಿದೆ, ಅವರು ಮುಖ್ಯಮಂತ್ರಿ ಆಗಿದ್ದಾರೆ. ಮುಂದೆಯೂ ಅವರೇ ಮುಖ್ಯಮಂತ್ರಿ ಆಗಲಿ ಎಂದು ಹೇಳಿದರು.


ಒಂದು ಕಮೆಂಟನ್ನು ಬಿಡಿ