ಅತಿವೃಷ್ಟಿ ಪರಿಹಾರಕ್ಕಾಗಿ ಕೇಂದ್ರಕ್ಕೆ ವರದಿ !


31-10-2017 1573

ಬೆಂಗಳೂರು: ರಾಜ್ಯದ ಅತಿವೃಷ್ಟಿ, ಅನಾವೃಷ್ಟಿಯಿಂದ ಉಂಟಾಗಿರುವ ನಷ್ಟದ ಬಗ್ಗೆ ಪರಿಹಾರ ಕೋರಿ ಶೀಘ್ರದಲ್ಲಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತಂತೆ ಎಲ್ಲಾ ಜಿಲ್ಲಾಧಿಕಾರಿಗಳಿಂದ ವರದಿ ಪಡೆದ ನಂತರ ಮನವಿ ಸಲ್ಲಿಸಲಾಗುವುದು ಎಂದರು. ಇತ್ತೀಚೆಗೆ ಕೆಲ ಜಿಲ್ಲೆಗಳಲ್ಲಿ ಸುರಿದ ಧಾರಕಾರ ಮಳೆಯಿಂದ ಭಾರೀ ಹಾನಿಯಾಗಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಮಳೆಯ ಕೊರತೆಯಿಂದ ಅನಾವೃಷ್ಟಿಯಾಗಿದೆ ಎಂದರು.

ಇನ್ನು ಮಂಡ್ಯ ಜಿಲ್ಲೆಯ ಮದ್ದೂರು ಬಳಿ ನಿನ್ನೆ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಜನರ ಕುಟುಂಬಗಳಿಗೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಘೋಷಿಸಿದರು. ಮತ್ತು ಗಾಯಾಳುಗಳ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಮಂಡ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಪ್ಪ ಅವರಿಗೆ ಸೂಚನೆ ನೀಡಲಾಗಿದೆ ಎಂದರು. ಬಿಜೆಪಿ ಮತ್ತು ಜೆಡಿಎಸ್ ಮುಖಂಡರಿಗೆ ಈಗಾಗಲೇ ವಿಧಾನಸಭೆಯ ಚುನಾವಣೆಯ ಸೋಲು ಕಾಡಲಾರಂಭಿಸಿದ್ದು ಇದಕ್ಕಾಗಿ ತಮ್ಮ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Kannada News Karnataka ಅತಿವೃಷ್ಟಿ ಅನಾವೃಷ್ಟಿ